ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಾರ ಪೇಟೆ ಪೊಲೀಸರು ಮೂವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.
ಈ ಹಿಂದೆ ಪ್ರಕರಣದಲ್ಲಿ ಬಂಧಿನಾಗಿದ್ದ ಕೆ.ಟಿ. ನವೀನ್ ಕೊಟ್ಟ ಮಾಹಿತಿ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಮಹಾರಾಷ್ಟ್ರ ದಲ್ಲಿ ಪೋಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಮೊಲ್ ಕಹಲೆ, ಅಮಿತ್ ದೇವಕರ್ ಮತ್ತು ಮನೋಹರ್ ಯಡಾವೆ ಎಂದು ಗುರುತಿಸಲಾಗಿದೆ.
ಬಂಧಿತರನ್ನು ೫ ನೇ ಎಸಿಎಂಎಂ ಕೋಟ್೯ಗೆ ಹಾಜರುಪಡಿಸಿದ ಉಪ್ಪಾರ ಪೇಟೆ ಪೊಲೀಸರು ನಂತರ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದ್ದಾರೆ.

