ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯುತ್ತಿದ್ದ ಬಿಎಸ್ ವೈ ಅವರು ಇದೀಗ ಮೃದು ಧೋರಣೆ ಪ್ರದರ್ಶಿಸಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ಮುಖ್ಯಮಂತ್ರಿ ಪದವಿ ಸಿಗುವುದಕ್ಕೆ ಕಾರಣಕರ್ತರಾದ ಸಿದ್ದರಾಮಯ್ಯರನ್ನು ಕುಮಾರಸ್ವಾಮಿ ಕಡೆಗಣಿಸಿದ್ದಾರೆ. ಪ್ರಮಾಣ ವಚನ ಸಮಾರಂಭದಲ್ಲಿ ಸಿದ್ದರಾಮಯ್ಯರನ್ನು ಸರಿಯಾಗಿ ಮಾತನಾಡಿಸಿಲ್ಲ. ಇದು ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸಾಣೇಹಳ್ಳಿ ಶ್ರೀಗಳ ವಿರುದ್ಧ ಹೆಚ್ಡಿಕೆ ಮಾತನಾಡಿದ್ದಕ್ಕೆ ಯಡಿಯೂರಪ್ಪ ಗರಂ ಆಗಿದ್ದು, ಸ್ವಾಮೀಜಿಗಳು ಅವರ ಅನಿಸಿಕೆಳನ್ನು ಹೇಳಿದ್ದಾರೆ. ಅದಕ್ಕಾಗಿ ನೀವು ಅವರನ್ನು ರಾಜಕೀಯ ಮಾಡಲು ಬನ್ನಿ ಎಂದು ಕರೆದಿದ್ದು, ಆ ಸಮಾಜದ ಜನಾಂಗಕ್ಕೆ ನೋವುಂಟು ಮಾಡಿದೆ ಎಂದು ಬಿಎಸ್ ವೈ ಕಿಡಿಕಾರಿದರು.

