33524966_1923704454307618_1145361739395629056_n

ಕಾಡಬೆಟ್ಟು: ವಗ್ಗದಲ್ಲಿ ಬಿಜೆಪಿ ವತಿಯಿಂದ ಬಂಟ್ವಾಳದ ನೂತನ ಶಾಸಕರಿಗೆ ಅಭಿನಂದನಾ ಸಭೆ ವಗ್ಗ ಶ್ರೀ ಶಾರದಾಂಬ ಮಂದಿರದ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಸಮಾರಂಭದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮಿಜಿಯವರು ಆಶೀರ್ವಚನ ನೀಡಿದರು.

ಈ ವೇಳೆ ಬಂಟ್ವಾಳದ ನೂತನ ಶಾಸಕ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರನ್ನು ಸನ್ಮಾನಿಸಲಾಯಿತು.

ಬಳಿಕ ಕಟೀಲು ಶ್ರೀ ದುರ್ಗಾಪರಮೇಶ್ವರಿಯಕ್ಷಗಾನ ಮೇಳದಿಂದ ಶ್ರೀ ದೇವಿಮಹಾತ್ಮೆಯಕ್ಷಗಾನ ಬಯಲಾಟ ನಡೆಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಮಾಜಿ ಶಾಸಕ ಪದ್ಮನಾಭಕೊಟ್ಟಾರಿ, ಕ್ಷೇತ್ರ ಸಮಿತಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಮತ್ತಿತರರು  ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *