ಫರಂಗಿಪೇಟೆ: ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ದ್ವಿಚಕ್ರ ಸವಾರ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಕಾರು ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ.
ಸದ್ಯ ಗಾಯಾಳು ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೆಚ್ಚಿನ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

