fbcc6ea0347c466dbc82392b5ccdfed3

ಬೆಂಗಳೂರು: ರಾಜ್ಯ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಇಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಮೈಸೂರು, ಚಿತ್ರದುರ್ಗ, ದ.ಕ. ಜಿಲ್ಲೆ, ತುಮಕೂರು, ಶಿವಮೊಗ್ಗ, ಮಂಡ್ಯ, ದಾವಣಗೆರೆ, ಚಿಕ್ಕಬಳ್ಳಾಪುರ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರು ಬಂದ್ ಗೆ ಬೆಂಬಲ ನೀಡಿಲ್ಲದಿರುವುದು ನೀರಸ ಪ್ರತಿಕ್ರಿಯೆಗೆ ಕಾರಣವಾಗಿದೆ.

ಅಂಗಡಿ-ಮುಂಗಟ್ಟುಗಳು, ಮಲ್ಟಿಪ್ಲೆಕ್ಸ್ ಗಳು, ಚಿತ್ರಮಂದಿರಗಳು ಎಂದಿನಂತೆ ಇದ್ದು, ಸಾರಿಗೆ ಸಂಚಾರ, ಜನಜೀವನ ಯಥಾಸ್ಥಿತಿಯಲ್ಲಿ ಸಾಗಿವೆ. ಕೇವಲ ಬಿಜೆಪಿ ಕಾರ್ಯಕರ್ತರು ಬೈಕ್ ಗಳಲ್ಲಿ ಬಾವುಟ ಹಿಡಿದು ರ್ಯಾಲಿ ನಡೆಸುತ್ತಿರುವುದು ಮಾತ್ರ ಎಲ್ಲ ಕಡೆಯೂ ಕಂಡುಬರುತ್ತಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಹಾಗೂ ಬಿಜೆಪಿ ಪಕ್ಷದ ಪ್ರಭಾವ ಹೆಚ್ಚಾಗಿರುವ ಉಡುಪಿ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಬಂದ್ ವಿಫಲವಾಗುತ್ತಿದೆ ಎಂಬ ಮಾಹಿತಿ ಬರುತ್ತಿವೆ.

ಚಿತ್ರದುರ್ಗದಲ್ಲಿ ಬಲವಂತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ್ದು, ರ್ಯಾಲಿಗೆ ಬಿಸಿ ಮುಟ್ಟಿಸಿದ್ದಾರೆ. ಮೈಸೂರಿನಲ್ಲಿಯೂ ಸಹ ಬಲವಂತದ ಬಂದ್ ಹೇರಿಕೆ ವಿರುದ್ಧ ಕಾರ್ಯಾಚರಣೆಗಿಳಿದ ಪೊಲೀಸರು, ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ರಾಮದಾಸ್ ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

By suddi9

Leave a Reply

Your email address will not be published. Required fields are marked *