DSC_0086

ಬಂಟ್ವಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಗ್ಗ ವಲಯದ  ಪಿಲಾತಬೆಟ್ಟು ಮತ್ತು ನಯನಾಡು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪುಂಜಲಕಟ್ಟೆ ಬಂಗ್ಲೆ ಮೈದಾನದಲ್ಲಿ ರವಿವಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಗತಿಪರ ಕೃಷಿಕ ಉದಯ ಕುಮಾರ್ ಜೈನ್ ಕಟ್ಟೆಮನೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಕೃಷಿಕರು, ಮಹಿಳೆಯರು ಮತ್ತು ಅನಕ್ಷರಸ್ಥರು ಸ್ವಾವಲಂಬಿ ಬದುಕು ಕಾಣುವಂತಾಗಿದೆ ಎಂದು ಹೇಳಿದರು.

ನೂತನ ಶಾಸಕ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಮಾತನಾಡಿ, ಈ ಯೋಜನೆಯ ಎಲ್ಲಾ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಈ ವೇಳೆ ನೂತನ ಪದಾಧಿಕಾರಿಗಳಿಗೆ ಪದಗ್ರಹಣ, ಉತ್ತಮ ತಂಡಗಳಿಗೆ ಬಹುಮಾನ ವಿತರಣೆ ಹಾಗೂ ನೂತನ ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲೆ ಪ್ರಾದೇಶಿಕ ನಿದರ್ದೇಶಕ ಮಹಾವೀರ ಅಜ್ರಿ, ಒಕ್ಕೂಟ ನಿಕಟಪೂರ್ವ ಅಧ್ಯಕ್ಷ ಮೋಹನ ಸಾಲ್ಯಾನ್ ಹೆಗ್ಡೆಬೆಟ್ಟು, ದಯಾನಂದ ಜಿ. ಕತ್ತಲ್ಸಾರ್,ಜಿಲ್ಲಾ ಪಂಚಾಯತ್ ಸದಸ್ಯ ಎಂ.ತುಂಗಪ್ಪ ಬಂಗೇರ, ತಾಲೂಕು ಪಂಚಾಯತ್ ಸದಸ್ಯ ರಮೇಶ್ ಪೂಜಾರಿ ಕುಡ್ಮೇರು, ಮುಖ್ಯ ಶಿಕ್ಷಕ ಅಶೋಕ್ ಕುಮಾರ್ ನೈನಾಡು, ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಎ., ಕೇಂದ್ರ ಸಮಿತಿ ಅಧ್ಯಕ್ಷ ಸದಾನಂದ ಗೌಡ, ನಿಕಟಪೂರ್ವ ಅಧ್ಯಕ್ಷೆ ನಾಗಲಕ್ಷ್ಮಿ, ಪಿಲಾತಬೆಟ್ಟು ನೂತನ ಅಧ್ಯಕ್ಷೆ ಸುಮಿತ್ರಾ, ನಯನಾಡು ಒಕ್ಕೂಟ ಅಧ್ಯಕ್ಷ ರಮೇಶ್ ಪೂಜಾರಿ ಮತ್ತಿತರರು ಇದ್ದರು.

ಮೇಲ್ವಿಚಾರಕಿ ನಳಿನಾಕ್ಷಿ ಕೆ. ಸ್ವಾಗತಿಸಿ, ಸೇವಾ ಪ್ರತಿನಿಧಿ ಅಮೃತಾ ಎಸ್. ವರದಿ ವಾಚಿಸಿದರು. ಶಶಿಧರ ನಾಯ್ಕ ವಂದಿಸಿದರು. ಸಂತೋಷ್ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *