dc

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಇದು ಮುಂಗಾರು ಮಳೆಯಾಗಿದೆ. ಬಿರುಗಾಳಿ ಅಥವಾ ಚಂಡಮಾರುತವಲ್ಲವೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಸ್ಪಷ್ಟಪಡಿಸಿದ್ದಾರೆ.

ಜನರು ಇದರಿಂದ ಭೀತಿ ಪಡಬೇಕಾಗಿಲ್ಲ. ಇದು ಬಿರುಗಾಳಿ ಅಥವಾ ಚಂಡಮಾರುತದಿಂದ ಉಂಟಾಗಿರುವ ಮಳೆಯಲ್ಲ. ಸಾಮಾನ್ಯ ಮುಂಗಾರು ಮಳೆ ಎಂದು ಸೆಂಥಿಲ್ ಅವರು ತಿಳಿಸಿದ್ದಾರೆ.

ಕೃತಕ ನೆರೆ ಪ್ರದೇಶಗಳಲ್ಲಿ ತುರ್ತು ರಕ್ಷಣಾ ಕ್ರಮ ಜಿಲ್ಲಾಡಳಿತದಿಂದ ಸೂಕ್ತ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ನೆರೆ ಅಥವಾ ಮಳೆಯಿಂದಾಗಿ ಯಾವುದೇ ರೀತಿಯ ಸಮಸ್ಯೆಯಾದರೆ ಜನರು ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಂ  ಸಂ. 1077 ಸಂಪರ್ಕಿಸಲು ಮನವಿ ಮಾಡಿಕೊಂಡಿದ್ದಾರೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ: ಮೀನುಗಾರಿಕಾ ದೋಣಿಗಳು ಮತ್ತು ಬೋಟ್‍ಗಳು ಯಾವುದೇ ಕಾರಣಕ್ಕೂ ಸಮುದ್ರಕ್ಕಿಳಿಯಬಾರದು. ಸಮುದ್ರ ತೀರಕ್ಕೆ ಪ್ರವಾಸಿಗರು ಮತ್ತು ಸಾರ್ವಜನಿಕರು ತೆರಳಬಾರದು. ನದಿ ತೀರದಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಕ್ಕೆ ತೆರಳಲು ಅವರು ಮನವಿ ಮಾಡಿಕೊಂಡಿದ್ದಾರೆ.

 

By Suddi9

Leave a Reply

Your email address will not be published. Required fields are marked *