ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಧಾನಸಭಾ ಕ್ಷೇತ್ರದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ರಾಜ್ಯ ಸಹವಕ್ತಾರೆ ಸುಲೋಚನ ಜಿ.ಕೆ. ಭಟ್, ರಾಮದಾಸ್ ಬಂಟ್ವಾಳ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಮಾರ್ಲ, ಪ್ರಸನ್ನ ಭಂಡಾರಿ, ಪ್ರಭಾಕರ ಪ್ರಭು, ಪಂಚಾಯತ್ ಉಪಾಧ್ಯಕ್ಷ ಯಶೋಧ, ಪುರುಷ ಸಾಲಿಯನ್, ಕ್ಷೇತ್ರದ ಉಪಾಧ್ಯಕ್ಷ ದೇವಪ್ಪ ಪೂಜಾರಿ, ಕ್ಷೇತ್ರ ಸಮಿತಿಯ ಸದಸ್ಯರಾದ ಜಗದೀಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.


