DSC_0241

ಬಂಟ್ವಾಳ: ಇಲ್ಲಿನ ಪಂಜಿಕಲ್ಲು ಗ್ರಾಮದ ಪುಂಚೋಡಿ ಎಂಬಲ್ಲಿ ಬಿಜೆಪಿ ಕಾರ್ಯಕರ್ತರ ಅಭಿನಂದನಾ ಸಭೆ ನಡೆಯಿತು.

ಈ ವೇಳೆ ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ ಮಾತನಾಡಿ, ಬಂಟ್ವಾಳದಲ್ಲಿ ದುರಹಂಕಾರದ ರಾಜಕಾರಣಕ್ಕೆ ಸೋಲಾಗಿದೆ. ಮುಂದಿನ ಲೋಕ ಸಭೆ ಚುನಾವಣೆಯಲ್ಲಿ ಮೋದಿ ವಿರೋಧಿಗಳು ಒಂದಾಗಿದ್ದು, ಕಾರ್ಯಕರ್ತರು ಈ ಸವಾಲನ್ನುಎದುರಿಸಲು ಸಿದ್ಧರಾಗಬೇಕು ದು ಕರೆ ನೀಡಿದರು

ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಪಕ್ಷ ಸಂಘಟಿತವಾಗಿ ಈ ಬಾರಿಯ ಚುನಾವಣೆಯನ್ನು ಎದುರಿಸಿದ್ದರಿಂದ ಗೆಲುವು ನಮ್ಮದಾಯಿತು. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸದ್ದಾರೆ  ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯ ತುಂಗಪ್ಪ ಬಂಗೇರಾ ಪಂಜಿಕಲ್ಲು, ಸಂಜೀವ ಪೂಜಾರಿ ಪಿಲಿಂಗಾಲು, ಕರುಣೇಂದ್ರ ಪೂಜಾರಿ, ಬಿಜೆಪಿ ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷ ಚಿದಾನಂದಕುಲಾಲ್, ಗ್ರಾಮ ಪಂಚಾಯತ್‍ ಉಪಾಧ್ಯಕ್ಷ ಲಕ್ಷ್ಮಣ್ ಪಂಜಿಕಲ್ಲು, ದಯಾನಂದ ಗೌಡ, ಹರೀಶ್ ಪೂಜಾರಿ, ಮಾಜಿ ಅಧ್ಯಕ್ಷೆ ಹರೀಣಾಕ್ಷಿ, ಬೂತ್ ಸಮಿತಿ ಅಧ್ಯಕ್ಷ ವಿಕೇಶ್, ಕೆ.ಎನ್. ಶೇಖರ್ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *