ಬಂಟ್ವಾಳ: ಶಾಲಾಭಿವೃದ್ಧಿ ಸಮಿತಿ ಹಾಗೂ ನವೋದಯ ಮಿತ್ರ ಕಲಾ ವೃಂದ ಸಂಯುಕ್ತಾಶ್ರಯದಲ್ಲಿ ಮೇ 31ರಂದು ತಾಲೂಕಿನ ನೆತ್ತರಕೆರೆ ಗ್ರಾಮದ ಕಳ್ಳಿಗೆ ಎಂಬಲ್ಲಿನ ಹಿರಿಯ ಪ್ರಾಥಮಿಕ ಸರಕಾರಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ 10ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಸೇರಿದಂತೆ ಮತ್ತಿತರ ಮುಖ್ಯ ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

