ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಮುನಿರತ್ನ ಅವರು ಇತರ ಅಭ್ಯರ್ಥಿಗಳಿಗಿಂತ 41,162 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಅವರಿಗೆ 1,03,195 ಮತಗಳು ಲಭ್ಯವಾಗಿದೆ. ಬಿಜೆಪಿಯ ತುಳಸಿ ಮುನಿರಾಜು ಗೌಡ ಅವರಿಗೆ 69,769 ಮತ್ತು ಜೆಡಿಎಸ್ ನ ರಾಮಚಂದ್ರ 54,289 ಮತಗಳನ್ನು ಪಡೆದಿದ್ದಾರೆ. ತಮ್ಮ ಅಭ್ಯರ್ಥಿ ಗೆಲುವು ಕಾಣುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.

