ಬಂಟ್ವಾಳ: ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವು ಇಲ್ಲಿನ ಕಳ್ಳಿಗೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮುಂದಿನ ದಿನಗಳಲ್ಲಿ ಶಾಲೆಗೆ ಬೇಕಾದ ಅನುದಾನವನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಪಡುವುದಾಗಿ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಕಳ್ಳಿಗೆ ಗ್ರಾ.ಪಂ. ಉಪಾಧ್ಯಕ್ಷ ಪುರುಷ.ಎನ್ ಸಾಲ್ಯಾನ್, ದಾನಿಗಳಾದ ಜ್ಯೋತಿಂದ್ರ ಪ್ರಸಾದ್ ಶೆಟ್ಟಿ ಮುಂಡಾಜೆಗುತ್ತು, ನಾರಯಣ ಹೊಳ್ಳ ನೆತ್ತರಕೆರೆ, ನವೀನ್ ಚಂದ್ರ ಶೆಟ್ಟಿ, ಶಾಲಾಭಿವೃದ್ಧಿ ಮೇಲುಸ್ತುವಾರಿ ಭಾಸ್ಕರ.ಎನ್., ನವೋದಯ ಮಿತ್ರ ವೃಂದ ಅಧ್ಯಕ್ಷ ಬಿ.ಸುರೇಶ್ ಭಂಡಾರಿ ಅರ್ಬಿ, ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್, ಸರಸ್ವತಿ ಹೊಳ್ಳರ ಬೈಲು ಮತ್ತಿತರರು ಉಪಸ್ಥಿತರಿದ್ದರು.


