ಕೋಟ: ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸಾಬರಕಟ್ಟೆ ಜಂಕ್ಷನ್ ಬಳಿ ಸೋಮವಾರ ನಡೆದಿದೆ.
ಮೃತರನ್ನು ವಸಂತ ಪೂಜಾರಿ (39) ಎಂದು ಗುರುತಿಸಲಾಗಿದೆ.
ಅವರು ಕರ್ತವ್ಯ ಮುಗಿಸಿ ಖಾಸಗಿ ಬಸ್ಸಿನಲ್ಲಿ ಉಡುಪಿಯಿಂದ ಬ್ರಹ್ಮಾವರ ಮಾರ್ಗವಾಗಿ ಶಂಕರನಾರಾಯಣದ ಹೈರು ಬೈಲುವಿಗೆ ಹೋಗುತ್ತಿದ್ದರು. ಅವರಿಗೆ ದಾರಿ ಮಧ್ಯೆ ಸಾಬರಕಟ್ಟೆ ಸಮೀಪ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಬಸ್‌ನಲ್ಲಿದ್ದವರು ಇವರನ್ನು ಸ್ಥಳೀಯ ವೈದ್ಯರ ಬಳಿ ಕರೆದುಕೊಂಡು ಹೋದರು. ಆದರೆ ವೈದ್ಯರು ಪರೀಕ್ಷಿಸಿದಾಗ ವಸಂತ ಪೂಜಾರಿ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

