KAR_9983

ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ರಿ. ಸಾರ್ವಜನಿಕ ಶಿಕ್ಷಣ ಇಲಾಖೆ , ತಾ.ಪಂಚಾಯತ್, ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ಅಮ್ಟಾಡಿ ಲೊರೆಟ್ಟೊ ಚರ್ಚ್ ಪ್ರೌಢಶಾಲೆಯಲ್ಲಿ ಕಾನೂನು ಮಾಹಿತಿ ಕಾರ್ಯಾಗಾರದ ಉದ್ಘಾಟನೆಯನ್ನು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರತಿಭಾ.ಡಿ.ಎಸ್ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ಶೈಲಜಾ ರಾಜೇಶ್ ಫೋಕ್ಸೋ ಕಾಯಿದೆ ಮತ್ತು ಮಹಿಳೆಯರ ಕುರಿತಾಗಿ ಕಾನೂನಿನ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸಹಾಯಕ ಸರಕಾರಿ ಅಭಿಯೋಜಕ ಎಂ.ಎಸ್.ಆಲಿ, ದ.ಕ.ಕೇಂದ್ರ ಸರಕಾರಿ ವಕೀಲರಾದ ಪ್ರಸಾದ್ ಕುಮಾರ್ ರೈ , ಹಿರಿಯ ವಕೀಲರಾದ ಅಜಿತ್ ಕುಮಾರ್ ರಾವ್, ಲೊರೆಟ್ಟೊ ಆಂಗ್ಲ ಮಾಧ್ಯಮ ಶಾಲಾ ಸಹಶಿಕ್ಷಕಿ ವೀಣಾ ಡಯಾಸ್, ಪ್ರಧಾನ ಕಾರ್ಯದರ್ಶಿ ಆಶಾಪ್ರಸಾದ್ ರೈ, ಮಾಜಿ ಅಧ್ಯಕ್ಷರುಗಳಾದ ಬಿ.ವಿ.ಶಣೈ, ಸುರೇಶ್ ಪುಜಾರಿ, ಉಮೇಶ್ ಕುಮಾರ್ ವೈ, ಶ್ರೀಧರ ಪೈ, ವಕೀಲರುಗಳಾದ ಆಶಾಮಣಿ.ಡಿ.ರೈ, ವಿನೋದ.ಎಸ್, ಯಶೋಧ,ಸತೀಶ್.ಬಿ, ಉಮಾಕರ್, ತಾಲೂಕು ಕಾನೂನು ಸೇವೆಗಳ ಸಮಿತಿ ಸಿಬ್ಬಂದಿ ನರಸೇಗೌಡ ಉಪಸ್ಥಿತರಿದ್ದರು. ಉಪಾಧ್ಯಕ್ಷ ಚಂದ್ರಶೇಖರ ಪುಂಚಮೆ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಸುಕುಮಾರ್ ವಂದಿಸಿ, ನ್ಯಾಯವಾದಿ ವಿನೋದ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *