ಬಂಟ್ವಾಳ: ಬಂಟ್ವಾಳ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಲು ನನ್ನ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ. ಇದಕ್ಕೆ ಕ್ಷೇತ್ರದ ಜನರ ಸಹಕಾರ ಅಗತ್ಯವಿದೆ ಎಂದು ಶಾಸಕ ಉಳಿಪ್ಪಾಡಿ ರಾಜೇಶ್ ನಾಯ್ಕ್ ತಿಳಿಸಿದ್ದಾರೆ.
ಇಲ್ಲಿನ ಪೂರ್ಲಿಪಾಡಿಯಲ್ಲಿ ಬಾಳ್ತಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ ಅವರು ಮಾತನಾಡಿದರು.
ನಾನು ರಾಜಧರ್ಮವನ್ನು ಪಾಲಿಸುವ ಮೂಲಕ ಪ್ರಮಾಣಿಕ ಸೇವಕನಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಬಿಜೆಪಿ ವಕ್ತಾರ ಹರಿಕ್ರಷ್ಣ ಬಂಟ್ವಾಳ ಮಾತನಾಡಿ, ಕಲ್ಲಡ್ಕ ಎನ್ನುವುದು ಕ್ರಾಂತಿಯ ಕ್ಷೇತ್ರ. ಕಲ್ಲಡ್ಕದಲ್ಲಿ ಕ್ರಾಂತಿಯಾದರೆ ಮಾತ್ರ ಜನರಿಗೆ ಶಾಂತಿ ಸಿಗುತ್ತದೆ. ಅಲ್ಲದೆ, ಧಾರ್ಮಿಕ, ಸಾಮಾಜಿಕ, ರಾಜಕೀಯವಾದ ಕ್ರಾಂತಿ ಹುಟ್ಟು ಕಲ್ಲಡ್ಕದಲ್ಲಿಯೇ
ಎಂದು ಹೇಳಿದರು.
ಸಭೆಯಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ಲೋಕಾನಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ಮಾಜಿ ಜಿ.ಪಂ.ಸದಸ್ಯ ಚೆನ್‌ಪ್ಪ. ಆರ್ ಕೋಟ್ಯಾನ್, ರೈತ ಮೋರ್ಚಾದ ಜಿಲ್ಲಾ ಉಪಾದ್ಯಕ್ಷ ಬಿ.ಕೆ ಅಣ್ಣು ಪೂಜಾರಿ, ವಕೀಲ ಶ್ರೀಧರ ಶೆಟ್ಟಿ ಪುಳಿಂಚ, ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಬಂಟ್ವಾಳ, ದೇವದಾಸ ಶೆಟ್ಟಿ, ಜಿಲ್ಲಾ ಎಸ್ಸಿ ಮೋರ್ಚಾದ ಅಧ್ಯಕ್ಷ ದಿನೇಶ್ ಅಮ್ಟೂರು, ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಪೂಜಾರಿ, ಗ್ರಾಮ.ಪಂ.ಅಧ್ಯಕ್ಷ ವಿಠಲ ನಾಯ್ಕ, ತಾ.ಪಂ. ಸದಸ್ಯೆ ಲಕ್ಮೀ ಗೋಪಾಲಾಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಕ್ಷೇತ್ರ ಸಮಿತಿ ಮಾಜಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಸ್ವಾಗತಿಸಿ, ರೈತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಬಿ.ಕೆ.ಅಣ್ಣು ಪೂಜಾರಿ ವಂದಿಸಿದರು. ಸಂತೋಷ್ ಬೊಲ್ಪೋಡಿ ನಿರೂಪಿಸಿದರು.

