ಕಲ್ಲಡ್ಕ: ಶ್ರೀರಾಮ ಪ್ರೌಢಶಾಲಾ ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಮಂಗಳವಾರ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾತನಾಡಿದ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಪರಿಸರದ ಸೊಬಗನ್ನು ಆಸ್ವಾದಿಸಿ, ಸಂತೋಷ ಪಡುವುದರ ಜತೆಗೆ ಪ್ರತಿಯೊಬ್ಬರೂ ಪರಿಸರ ಉಳಿಸಿ ಬೆಳೆಸುವ ಕಾರ್ಯವನ್ನು ನಡೆಸಬೇಕು. ಸ್ವಚ್ಛ ಪರಿಸರವನ್ನು ಕಾಪಾಡಿ ಉತ್ತಮ ಆರೋಗ್ಯ ಪಡೆಯಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ವಿದ್ಯಾ ಕೇಂದ್ರದ ಕೇಂದ್ರ ಕಚೇರಿ ರಾಜೇಂದ್ರದ ಸೌಧದ ಪಕ್ಕದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶ್ವನಾಥ ಪ್ರಭು, ವಸಂತಿ, ಮುಖ್ಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


