KAR_0169

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂಚಾಯತ್, ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ತಾಲೂಕಿನ ಶಂಭೂರಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರ ಕ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾನೂನು ಮಾಹಿತಿ ಕಾರ್ಯಾಗಾರವನ್ನು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರತಿಭಾ.ಡಿ.ಎಸ್. ಉದ್ಘಾಟಿಸಿದರು.

ವಕೀಲರ ಸಂಘದ ಉಪಾಧ್ಯಕ್ಷ ಚಂದ್ರಶೇಖರ ರಾವ್ ಪುಂಚಮೆ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ರವೀಂದ್ರ ಕುಕ್ಕಾಜೆ ಫೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಹಾಯಕ ಸರಕಾರಿ ಅಭಿಯೋಜಕ ಎಂ.ಎಸ್.ಆಲಿ, ದ.ಕ.ಕೇಂದ್ರ ಸರಕಾರಿ ವಕೀಲ ಪ್ರಸಾದ್ ಕುಮಾರ್ ರೈ , ಹಿರಿಯ ವಕೀಲ ಅಜಿತ್ ಕುಮಾರ್ ರಾವ್,  ನ್ಯಾಯವಾದಿಗಳಾದ ವಿನೋದ ಎ.ಎಸ್, ಸತೀಶ್ ಬಿ., ತಾ.ಕಾ.ಸೇವೆ ಸಮಿತಿ ಸಿಬ್ಬಂದಿ ನರಸೇ ಗೌಡ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ಸ್ವಾಗತಿಸಿದರು. ವಿನೋದ ಎಸ್ ವಂದಿಸಿ, ನಗರ ಠಾಣಾ ಸಿಬ್ಬಂದಿ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *