5 Svpur Ph-2

ಶ್ರೀನಿವಾಸಪುರ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನೆಲ ಸಮತಟ್ಟು ಮಾಡುವ ಜೊತೆಗೆ ಕ್ರೀಡಾಂಗಣಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ಜಾಲಿ ಕ್ರೀಡಾ ಯುವಕರ ಸಂಘದ ಅಧ್ಯಕ್ಷ ಎ.ಎನ್.ಜಗದೀಶ್‍ಬಾಬು ಯುವಜನ ಸೇವ ಮತ್ತು ಕ್ರೀಡಾ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಿ ಸೌಲಭ್ಯಕ್ಕೆ ಆಗ್ರಹಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀನಿವಾಸಪುರ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಉತ್ತಮ ಕ್ರೀಡಾಪಟುಗಳು ಇದ್ದಾರೆ. ಆದರೆ ಇವರಿಗೆ ಸೂಕ್ತ ಆಟದ ಮೈದಾನಗಳು ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಮಟ್ಟದಲ್ಲಿ ತಮ್ಮ ಪ್ರತಿಭೆಗಳನ್ನು ಗುರುತಿಸಿಕೊಂಡಿರುವ ಕ್ರೀಡಾಪಟುಗಳು ಸೂಕ್ತ ಮೂಲಭೂತ ಸೌಲಭ್ಯಗಳ ಕೊರತೆಯಿಂದ ತಮ್ಮ ಪ್ರತಿಭೆ ಹೊರ ತೆಗೆಯಲು ಕಷ್ಟಕರ. ಈ ಬಗ್ಗೆ ಕೋಲಾರ ಯುವ ಜನ ಸಬಲೀಕರಣ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಆದರೂ ಪ್ರಯೋಜನ ಕಂಡು ಬರುತ್ತಿಲ್ಲ ಹಾಗು ಸ್ಥಳೀಯ ಅಧಿಕಾರಿಗಳು ಸಹ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗಿರೀಶ್ ಉಪಸ್ಥಿತರಿದ್ದರು.

 

 

By suddi9

Leave a Reply

Your email address will not be published. Required fields are marked *