ಕೋಲಾರ: ಇಂದಿನ ದಿನಗಳಲ್ಲಿ ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಆಗಿದೆ ಎಂದು ಹರಟಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ ನಾಗಭೂಷಣ್ ಅಭಿಪ್ರಾಯಪಟ್ಟಿದ್ದಾರೆ.
ತಾಲೂಕಿನ ಹರಟಿ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ವಿಶ್ವ ಪರಿಸರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ನಾವು ಬರೀ ನಮ್ಮ ಹಕ್ಕುಗಳನ್ನು ಮಾತ್ರ ಕೇಳುವುದು ಸರಿಯಲ್ಲ. ಹಕ್ಕುಗಳ ಜತೆಗೆ ನಮ್ಮ ಕರ್ತವ್ಯವನ್ನು ನಿಭಾಯಿಸಿದಾಗ ಮಾತ್ರ ಉತ್ತಮ ಪರಿಸರ ಕಾಪಾಡಲು ಸಾಧ್ಯ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾದ್ಯಾಯ ಜಿ. ಶ್ರೀನಿವಾಸ್ ಮಾತನಾಡಿ, ಗಿಡಮರಗಳನ್ನು ಮಕ್ಕಳಂತೆ ಪ್ರೀತಿಸಿ ಮನೆಗೆರಡು ಮರ, ಊರಿಗೊಂದು ವನ ಎಂಬ ನಾಣ್ಮುಡಿಯನ್ನು ಜಾರಿ ತರಲು ಪ್ರಯಾಣಿಕ ಪ್ರಯತ್ನ ಮಾಡಬೇಕು ಎಂದರು.
ಶಿಕ್ಷಕರಾದ ಹೆಚ್.ಕೃಷ್ಣಪ್ಪ, ಪಿ.ಎಂ. ಗೋವಿಂದಪ್ಪ, ಎಂ.ಆರ್. ಮೀನಾ, ಹೆಚ್. ಮುನಿಯಪ್ಪ, ಆರ್. ಮಂಜುಳ, ಕೆ. ಮಮತಾ ಮತ್ತಿತರರು ಉಪಸ್ಥಿತರಿದ್ದರು.


