ಮೈಸೂರು: ನನಗೆ ಪ್ರಧಾನಿ ನರೇಂದ್ರ ಮೋದಿ ಮೇಲೆ ಅಸಮಾಧಾನ ಇಲ್ಲ ಎಂದು ಪೇಜಾವರ ಮಠದ ಶ್ರೀವಿಶ್ವೇಶ್ವರ ತೀರ್ಥ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಹೇಳಿಕೆಯನ್ನು ಇಟ್ಟುಕೊಂಡು ಕೆಲ ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ. ಕೇಂದ್ರದ ಯೋಜನೆಗಳು ಸಮಾಧಾನ ತಂದಿಲ್ಲ ಎಂದು ನಾನು ತಿಳಿಸಿಲ್ಲ ಎಂದರು.
ಕಪ್ಪು ಹಣ, ಗಂಗಾ ನದಿ ಶುದ್ಧೀಕರಣ ಆಗಿಲ್ಲ ಎನ್ನುವ ವಿಚಾರ ಇಟ್ಟುಕೊಂಡು ಮಾತನಾಡಿದ್ದೇನೆ.ಇದನ್ನು ಕೆಲ ಬಿಜೆಪಿ ನಾಯಕರು ನನ್ನ ಹೇಳಿಕೆಯನ್ನು ಬೇರೆ ರೀತಿ ಅರ್ಥಮಾಡಿಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

