ಅಟ್ಟಪ್ಪಾಡಿ: 9 ತಿಂಗಳ ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ನ ವ್ಯವಸ್ಥೆ ಲಭ್ಯವಿಲ್ಲದ ಕಾರಣ ಜೋಲಿಯಲ್ಲಿರಿಸಿ ಹೆಗಲ ಮೇಲೆ ಹೊತ್ತು ಹೋಗಿರುವ ಘಟನೆ ಕೇರಳದಲ್ಲಿ ನಡೆದಿದೆ.
ಈ ಘಟನೆ ಕೇರಳದ ಪಾಲ್ಗಾಟ್‌ನ ಅಟ್ಟಪ್ಪಾಡಿಯಲ್ಲಿ ನಡೆದಿದೆ.
ಇಲ್ಲಿನ ಬುಡಕಟ್ಟು ಸಮುದಾಯದ 9ತಿಂಗಳ ತುಂಬು ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ದಾಖಲಿಸಬೇಕಾದಗ ಅಲ್ಲಿ ಅಂಬ್ಯುಲೆನ್ಸ್ ಲಭ್ಯವಾಗಿಲ್ಲ. ಈ ಕಾರಣಕ್ಕೆ ಅಲ್ಲಿನ ಇಬ್ಬರು ಪುರುಷರು ಕಟ್ಟಿ ಮಾಡಿರುವ ಜೋಲಿಗೆಯಿಂದ ಮಹಿಳೆಯನ್ನು ಹೊತ್ತು ಸಾಗಿದ್ದಾರೆ.
ಕಟ್ಟಿಗೆಗೆ ಬಟ್ಟೆಯನ್ನು ಕಟ್ಟಿ ಜೋಲಿಗೆಯನ್ನು ಮಾಡಿ ಅದರಲ್ಲೊ ಮಹಿಳೆಯನ್ನು ಹೊತ್ತುಯ್ದಿದ್ದಾರೆ. ಈ ಎಲ್ಲ ದೃಶ್ಯಾವಳಿಗಳನ್ನಿ ಅಲ್ಲಿಂದ್ದವರು ವಿಡಿಯೋ ಮಾಡಿದ್ದಾರೆ. ಅವರು ಕಲ್ಲು ಬಂಡೆಗಳ ಹಾದಿಯಲ್ಲಿ ನೀರು ಹರಿಯುತ್ತಿರುವ ಸ್ಥಳವನ್ನು ದಾಟುತ್ತಿರುವ ದೃಶ್ಯ ಚಿತ್ರದಲ್ಲಿದೆ. ಇನ್ನೂ ಮಹಿಳೆ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ತಿಳಿದು ಬಂದಿದೆ.

