wind2

ಮಂಗಳೂರು: ಮಹಾರಾಷ್ಟ್ರ ಕರಾವಳಿಯಿಂದ ಕೇರಳದವರೆಗೆ ದಟ್ಟಮಾಡಗಳ ಸಾಲು ನಿರ್ಮಾಣವಾಗಿದ್ದು, ಜೂ.8 ರಂದು ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಲಿದ್ದು, ಇದರ ಪರಿಣಾಮ ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಚುರುಕಾಗಲಿದ್ದು ಜೂ 7 ರಿಂದ ಹಲವು ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದೆಲ್ಲೆಡೆ ಜೂ.10 ರವರೆಗೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಪ್ರಮುಖವಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಭದ್ರತೆ ಘೋಷಿಸಲಾಗಿದೆ.

ಹವಾಮಾನ ಇಲಾಖೆಯ ಸೂಚನೆಯಂತೆ ಜೂನ್ 8 ರಂದು ದಕ್ಷಿಣ ಕನ್ನಡ , ಉಡುಪಿ ಹಾಗು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಆದೇಶ ಹೊರಡಿಸಲಾಗಿದೆ.

By suddi9

Leave a Reply

Your email address will not be published. Required fields are marked *