ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಮುಂಜಾಗ್ರತಾ ಕ್ರಮಕೈಗೊಳ್ಳುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಶಾಲೆಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಭಾರೀ ಮಳೆಯ ಕಾರಣ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸಾರ್ವಜನಿಕರು ಹೊರಬರುವುದೇ ದುಸ್ತರವಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನೂ ಕೆಲ ದಿನಗಳ ಕಾಲ ಮಳೆ ಇದೇ ರೀತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

