ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳು ಸಂಶೋಧಕ ಪ್ರಶಾಂತ್‍ರಾಮ್ ಕೊಟ್ಟಾರಿ ಅವರನ್ನು ನಗರದಲ್ಲಿನ ಅಕಾಡೆಮಿಯ ಸಿರಿ ಚಾವಡಿಯಲ್ಲಿ ಸನ್ಮಾನಿಸಲಾಯಿತು.
ಅಕಾಡೆಮಿಯ ಅಧ್ಯಕ್ಷ ಎ.ಸಿ.ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಶಾಂತ್‍ರಾಮ್ ಕೊಟ್ಟಾರಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಅಕಾಡೆಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ , ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕ ರಾಜೇಶ್ ಜಿ, ಅಕಾಡೆಮಿಯ ಸದಸ್ಯರು ಉಪಸ್ಥಿತರಿದ್ದರು.
ಅಕಾಡೆಮಿ ಸದಸ್ಯ ತಾರಾನಾಥ್ ಗಟ್ಟಿ ಕಾಪಿಕಾಡ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ವೃತ್ತಿಯಲ್ಲಿ ಸಾಫ್ಟ್‍ವೇರ್ ಇಂಜಿನಿಯರ್ ಆಗಿರುವ ತುಳುವ ಪ್ರಶಾಂತ್‍ರಾಮ್ ಕೊಟ್ಟಾರಿ ಅವರು ಕಳೆದ ಐದು ವರ್ಷಗಳಿಂದ ವೃತ್ತಿ ನಿಮಿತ್ತ ಅಮೆರಿಕಾದ ಜಾರ್ಜಿಯಾದಲ್ಲಿ ನೆಲೆಸಿರುವವರು. ಅಮೆರಿಕನ್ ಫೋಕ್‍ಲೋರ್ ಸೊಸೈಟಿಯ ಗೌರವ ಸದಸ್ಯ ಕೊಟ್ಟಾರಿ ಅವರು ತುಳು ಭಾಷೆಯ ಬಗ್ಗೆ ಅಮೆರಿಕಾ ದೇಶದ ವಿವಿಧ ಪ್ರಾಂತ್ಯಗಳಲ್ಲಿ ಮೂವತ್ತಕ್ಕೂ ಹೆಚ್ಚು ತುಳು ಭಾಷಾ ಪರಿಚಯ – ಕಲಿಕೆ ಶಿಬಿರಗಳನ್ನು ನಡೆಸಿದ್ದಾರೆ .

