ಮಂಗಳೂರು: ವಿಧಾನಪರಿಷತ್ ಸದಸ್ಯ, ಮುಸ್ಲಿಂ ಸಮುದಾಯದ ಹಿರಿಯ ನಾಯಕ ಸೈಯದ್ ಅಪ್ಸರ್ ಆಘಾ ಹೃದಯಾಘಾತದಿಂದ ಶುಕ್ರವಾರ ರತ್ರಿ ನಿಧನರಾಗಿದ್ದಾರೆ.
ಅಪ್ಸರ್ ಅವರಿಗೆ ಕಳೆದ ಮೂರು ತಿಂಗಳಿಂದ ಆರೋಗ್ಯ ಸಮಸ್ಯೆಯಿದ್ದು, ರಾತ್ರಿ 1.30ರ ಸುಮಾರಿಗೆ ಹೃದಯಾಘಾತವಾಗಿದೆ, ತಕ್ಷಣ ಆಸ್ಪತ್ರೆಗೆ ಸೇರಿಸಿದರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಮಧ್ಯಾಹ್ನ ಮೂರು ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

