Panite-Dube

ಬೆಳ್ತಂಗಡಿ: ಮಹಿಳೆಯೋರ್ವರು ನದಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ರೇವತಿ(50) ಎಂದು ಗುರುತಿಸಲಾಗಿದೆ.

ಕಳೆದೆರಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿಗಳು ತುಂಬಿ ತುಳುಕುತ್ತಿದ್ದು, ಮಹಿಳೆಯು ನದಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿರುವ ವೇಣೂರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

By suddi9

Leave a Reply

Your email address will not be published. Required fields are marked *