ಬಂಟ್ವಾಳ: ಬಂಟ್ವಾಳ ತಾಲೂಕಿನ ದಡ್ಡಲಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ವತಿಯಿಂದ ಆರಂಭಿಸಿದ ಉಚಿತ ಶಾಲಾ ಬಸ್ ಸೌಲಭ್ಯಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಇತ್ತೀಚೆಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಸಂಘಟನೆಯೊಂದರ ಸಹಭಾಗಿತ್ವದಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಸಿಗುತ್ತಿರುವುದು ಶ್ಲಾಘನೀಯ ಎಂದು ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಹೇಳಿದರು.
ಬಿಜೆಪಿ ಜಿಲ್ಲಾ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಯಾದರೆ ದೇಶದ ಚಿತ್ರಣ ಬದಲಾಗಲು ಸಾಧ್ಯ ಎಂದರು.
ಈ ವೇಳೆ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ಪ್ರಾಸ್ತವಿಕ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ತುಂಗಪ್ಪ ಬಂಗೇರ, ಪಂಜಿಕಲ್ಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರ ಯೋಗೀಶ್, ಕೆನರಾ ಬ್ಯಾಂಕಿನ ಮನೋಹರ್ ನಾಯಕ್, ಗ್ರಾಮ ಪಂಚಾಯತ್ ಸದಸ್ಯರಾದ ಪೂವಪ್ಪ ಮೆಂಡನ್, ಕೇಶವ ಗೌಡ ದಡ್ಡಲಕಾಡು, ರೂಪ ಲೋಕನಾಥ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ, ಕರುಣೇಂದ್ರ ಪೂಜಾರಿ, ಧರ್ಣಪ್ಪ ಪೂಜಾರಿ, ನವೀನ್ ಸೇಸಗುರಿ, ವಿನೋದ್ ಮತ್ತಿತರರು ಇದ್ದರು.
ಮುಖ್ಯಶಿಕ್ಷಕ ಮೌರೀಸ್ ಡಿಸೋಜಾ ಸ್ವಾಗತಿಸಿ, ಪುರುಷೋತ್ತಮ ಅಂಚನ್ ವಂದಿಸಿದರು. ಸಹಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್ ಕಾರ್ಯಕ್ರಮ ನಿರೂಪಿಸಿದರು.

