21-1445393236-06-1444138036-pic2

ಬಂಟ್ವಾಳ:  ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ತೀರ್ಮಾನಿಸಲಾಗಿದ್ದು,  ಇಲ್ಲಿನ  ಉದ್ಯಮದಾರರು ಮತ್ತು ಸಾರ್ವಜನಿಕರಿಗೆ ಈಗಾಗಲೇ ಸಾಕಷ್ಟು ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಪುರಸಭೆಯ ವತಿಯಿಂದ ಇಲ್ಲಿನ ಅಂಗಡಿಗಳಿಗೆ ದಾಳಿ ನಡೆಸಿ, ಅಂತಹ ಸಾಮಾಗ್ರಿಗಳನ್ನು ಮುಟ್ಟುಗೋಲು ಹಾಕಿಕೊಂಡು ಬಳಿಕ ರೂ.5,000 ದಂಡ ವಿಧಿಸಲಾಗುವುದು ಎಂದು ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *