ನವದೆಹಲಿ: ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ಮುಖಂಡ ಅಟಲ್ ಬಿಹಾರಿ ವಾಜಪೇಯಿ ಅವರನ್ನು ತೀವ್ರ ಅನಾರೋಗ್ಯದ ಕಾರಣದಿಂದ ಸೋಮವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಕೆಲ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿರುವ 93ರ ಹರೆಯದ ವಾಜಪೇಯಿ ಅವರು ನೆನಪಿನ ಶಕ್ತಿ ಕಳೆದುಕೊಂಡಿದ್ದರು.
ಜನಪ್ರಿಯ ಪ್ರಧಾನಿಗಳಲ್ಲಿ ಒಬ್ಬರಾಗಿರುವಂತಹ ವಾಜಪೇಯಿ ಅವರು ಹಲವಾರು ಜನಪರ ಯೋಜನೆಗಳಿಗೆ ಚಾಲನೆ ನೀಡಿದ್ದರು.

