abvp_belth_nnr_newsk_15332

ಬೆಳ್ತಂಗಡಿ: ರಾಜ್ಯದ ಎಲ್ಲಾ ವರ್ಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಸೋಮವಾರ ಬೆಳ್ತಂಗಡಿ ನಗರ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ಮೂಲಕ ಧರಣಿ ನಡೆಸಿ ಬಳಿಕ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸರ್ಕಾರವು ಎಲ್ಲಾ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ಗ್ರಾಮೀಣ ಭಾಗದಿಂದ ಬಸ್ ಪಾಸ್ ಹೊಂದಿದ ವಿದ್ಯಾರ್ಥಿಗಳು ನಗರ ಸಾರಿಗೆಯಲ್ಲಿ ಸಂಚರಿಸಲು ಅನುಮತಿ ನೀಡಬೇಕು. ರಾಜ್ಯದಲ್ಲಿ ಕೆಲವೊಂದು ಗ್ರಾಮೀಣ ಭಾಗಗಳು ಬಸ್ ವ್ಯವಸ್ಥೆಯಿಂದ ವಂಚಿತವಾಗಿದ್ದು, ಅಂತಹ ಪ್ರದೇಶಗಳಿಗೆ ಸರ್ಕಾರ ಪಾಸ್ ಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿ, ಹಲವು ಬೇಡಿಕೆಯುಳ್ಳ ಮನವಿಯನ್ನು ಬೆಳ್ತಂಗಡಿ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಯವರಿಗೆ ನೀಡಲಾಯಿತು.

ತಾಲೂಕು ಸಂಚಾಲಕ ತೀಕ್ಷಿತ್ ಕೆ., ನಗರ ಕಾರ್ಯದರ್ಶಿ ಸುಮಂತ್, ಮೊದಲಾದವರು ನೇತೃತ್ವ ವಹಿಸಿದ್ದರು.

By suddi9

Leave a Reply

Your email address will not be published. Required fields are marked *