UT-Khader

ಮಂಗಳೂರು: ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಟೆಂಪಲ್ ರನ್ ಮುಂದುವರಿಸಿದ್ದು,  ಕುದ್ರೋಳಿ ಶ್ರೀಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತನ್ನ ಬೆಂಬಲಿಗರೊಂದಿಗೆ ಆಗಮಿಸಿದ ಯು.ಟಿ.ಖಾದರ್ ಗೋಕರ್ಣನಾಥೇಶ್ವರ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕ್ಷೇತ್ರದ ವತಿಯಿಂದ ನೂತನ ಸಚಿವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.

ಕರಾವಳಿಯ ಏಕೈಕ ಕಾಂಗ್ರೆಸ್​ ಶಾಸಕರಾಗಿ ಆಯ್ಕೆಯಾದ ಯು.ಟಿ.ಖಾದರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮಂಗಳೂರಿಗೆ ಆಗಮಿಸದ ಬಳಿಕ ಎಲ್ಲಾ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ, ಕನ್ಯಾಡಿ ಶ್ರೀರಾಮ ದೇವಸ್ಥಾನ, ಮಸೀದಿ ಹಾಗೂ ಚರ್ಚ್‌ಗಳಿಗೂ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಎಲ್ಲಾ ಧರ್ಮದ ದೇವರ ಹಾಗೂ ಜನರ ಆಶೀರ್ವಾದ ಬೇಕೆಂಬ ಹಿನ್ನೆಲೆಯಲ್ಲಿ ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ಭೇಟಿ ನೀಡುವುದಾಗಿ ಖಾದರ್ ಹೇಳಿಕೊಂಡಿದ್ದಾರೆ.

By suddi9

Leave a Reply

Your email address will not be published. Required fields are marked *