Cow

ಬಂಟ್ವಾಳ: ರಾಜ್ಯದ ಗಡಿಭಾಗದಿಂದ ಕೇರಳಕ್ಕೆ ಅಕ್ರಮವಾಗಿ ಗೋಸಾಗಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕೇರಳದ ಎಣ್ಮಕಜೆ ಗ್ರಾಮದ ಬಳಪು ಮನೆ ನಿವಾಸಿ ಇರ್ಷಾದ್ ಹಾಗೂ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಮರಕ್ಕಿಣಿ ನಿವಾಸಿ ರಾಶೀದ್ (19) ಎಂದು ಗುರುತಿಸಲಾಗಿದೆ.

ತಾಲೂಕಿನ ಪೆರುವಾಯಿಂದ ಬಾಯಾರು ಕೇರಳದ ಕಡೆಗೆ ಜಾನುವಾರು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ವಿಟ್ಲ ಪೊಲೀಸರು ಇಬ್ಬರು ಬಂಧಿಸಿದ್ದಾರೆ. ಅಲ್ಲದೆ, ಕೃತ್ಯಕ್ಕೆ ಬಳಸಿದ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

By Suddi9

Leave a Reply

Your email address will not be published. Required fields are marked *