images-17

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಜೂ. 14ರಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್‌.ವಿ. ದೇಶಪಾಂಡೆ ಭೇಟಿ ನೀಡಿ, ಮಳೆಹಾನಿ ಪ್ರದೇಶಗಳಿಗೆ ತೆರಳಿ ಪರಿಹಾರ ಕ್ರಮಗಳ ವೀಕ್ಷಣೆ ನಡೆಸಲಿದ್ದಾರೆ.

ಅಂದು ಬೆಳಗ್ಗೆ 6.35 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರುವ ಅವರು ಬಳಿಕ ಮಂಗಳೂರು ನಗರಕ್ಕೆ ಆಗಮಿಸಿ, 7.30 ಕ್ಕೆ ಸಾರ್ವಜನಿಕರು ಮತ್ತು ಅಧಿಕಾರಿಗಳ ಭೇಟಿ ನಡೆಸಲಿದ್ದಾರೆ.

ನಂತರ 8.30 ಕ್ಕೆ ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ಹಾಗೂ ಪರಿಹಾರ ಕ್ರಮಗಳ ವೀಕ್ಷಣೆ ನಡೆಸಲಿದ್ದಾರೆ. 11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಮಳೆ-ಬೆಳೆ ಪರಿಸ್ಥಿತಿ, ಮಳೆಹಾನಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳ ಬಗ್ಗೆ ಪರಿಶೀಲನಾ ಸಭೆ ನಡೆಸಲಿದ್ದು, ಸಭೆಯ ಬಳಿಕ ಮಧ್ಯಾಹ್ನ 1.30ಕ್ಕೆ ಮಂಗಳೂರಿನಿಂದ ರಸ್ತೆಯ ಮೂಲಕ ಉಡುಪಿಗೆ ತೆರಳಲಿದ್ದಾರೆ.

ರಾತ್ರಿ 7.30 ಕ್ಕೆ ಉಡುಪಿಯಿಂದ ಮಂಗಳೂರಿಗೆ ಆಗಮಿಸಿ, 8.45 ಕ್ಕೆ ವಿಮಾನದ ಮೂಲಕ ಮುಂಬೈಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *