ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ದಕ್ಷಿಣ ಶಕ್ತಿ ಕೇಂದ್ರದ ಅಧ್ಯಕ್ಷ ದೇವೋಜಿ ರಾವ್ (56) ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ.
ಆರ್ಯ ಯಾನೆ ಮರಾಠ ಕ್ಷತ್ರೀಯ ಸಂಘದ ಅಧ್ಯಕ್ಷರಾಗಿದ್ದ ದೇವೋಜಿ ರಾವ್ ನಗರದ ಜಲ್ಲಿಗುಡ್ಡೆ ನಿವಾಸಿಯಾಗಿದ್ದು, ಮಂಗಳೂರು ಮತ್ತು ಕಾಸರಗೋಡಿನ ಅಧ್ಯಕ್ಷರಾಗಿದ್ದರು. ಜಲ್ಲಿಗುಡ್ಡೆ ಅಂಬಾಭವಾನಿ ಭಜನಾ ಮಂಡಳಿಯ ಸ್ಥಾಪಕ ಅಧ್ಯಕ್ಷರಾಗಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ, ಪ್ರಸ್ತುತ ಮಂಗಳೂರಿನ ಟ್ರಾವೆಲ್ ಏಜೆನ್ಸಿಯಾದ ಮೂಕಾಂಬಿಕಾ ಎಂಟರ್ ಪ್ರೈಸಸ್ ನ ಮಾಲಕರಾಗಿದ್ದರು.
ಮೃತರು ಪತ್ನಿ ಹಾಗೂ ಮೂರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್ ಕಾಮತ್ ಹಾಗೂ ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಠಂದೂರು, ಮೋನಪ್ಪ ಭಂಡಾರಿ, ಕ್ಯಾ. ಗಣೇಶ್ ಕಾರ್ಣಿಕ್ ಮತ್ತಿತರರು ಅಂತಿಮ ದರ್ಶನ ಪಡೆದರು.

