narendra-nayak_photo-by-rahul-m_vantage_the-caravan-magazine_10-october-2015-700x467

ಮಂಗಳೂರು: ವಿಚಾರವಾದಿ ಪ್ರೋ. ಕಲ್ಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಬಳಿಕ ವಿಚಾರವಾದಿ ಪ್ರೋ. ನರೇಂದ್ರ ನಾಯಕ್ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆಯೇ? …. ಎನ್ನುವ ಅನುಮಾನ ಇನ್ನೊಮ್ಮೆ ಕಾಡಲಾರಂಭಿಸಿದೆ.

ಜೂ. 12 ರಂದು ಅಪರಿಚಿತ ವ್ಯಕ್ತಿಯೊಬ್ಬ ಪ್ರೋ. ನರೇಂದ್ರ ನಾಯಕ್ ಅವರು ವಾಸಿಸುವ ಮಂಗಳೂರಿನ ಹ್ಯಾಟ್ ಹಿಲ್ ನಲ್ಲಿರುವ ನೋಯಲ್ ಪಾರ್ಕ್ ಫ್ಲಾಟ್ ಗೆ  ಬಂದು ತನ್ನ ಶಿಕ್ಷಕರೊಬ್ಬರಿಗೆ ಕೆಲಸದವರು ಬೇಕು ಎಂದು ಪ್ಲ್ಯಾಟ್ ನಲ್ಲಿ ವಿಚಾರಿಸಿದ್ದಾನೆ, ಆ ವ್ಯಕ್ತಿಯ ನಡವಳಿಕೆ ಬಗ್ಗೆ ಪ್ಲ್ಯಾಟ್ ನ ವಾಚ್ ಮ್ಯಾನ್ ಅನುಮಾನಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಮರು ಪ್ರಶ್ನೆ ಹಾಕಿದ ಕೂಡಲೇ ಉತ್ತರಿಸಲಾಗದ ಆ ಅಪರಿಚಿತ ವ್ಯಕ್ತಿ ಅಲ್ಲಿಂದ ಏಕಾಏಕಿ ಓಡಲಾರಂಭಿಸಿದ್ದಾನೆ.

ಪ್ಲ್ಯಾಟ್ ನ ವಾಚ್ ಮ್ಯಾನ್ ಆ ಅಪರಿಚಿತ ವ್ಯಕ್ತಿಯನ್ನು ಹಿಂಬಾಲಿಸಿಕೊಂಡು ಹೋಗಿದ್ದರಾದರೂ ಹಿಡಿಯಲು ಸಾಧ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ಆ ಅಪರಿಚಿತ ವ್ಯಕ್ತಿಯ ಬಗ್ಗೆ ಅನುಮಾನ ಮೂಡಲಾರಂಭಿಸಿದೆ. ಈ ಹಿಂದೆ ಕೂಡ ಪ್ರೋ. ನರೇಂದ್ರ ನಾಯಕ್ ಅವರ ಕೊಲೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತು ಪ್ರೋ. ನರೇಂದ್ರ ನಾಯಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಿಸಿದ್ದಾರೆ. ಪ್ರೊ. ನರೇಂದ್ರ ನಾಯಕ್ ಅವರಿಗೆ ಜೀವಕ್ಕೆ ಅಪಾಯ ಇರುವ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಇಬ್ಬರು ಗನ್ ಮ್ಯಾನ್ ಒದಗಿಸಿದೆ. ಆದರೆ ಇತ್ತೀಚೆಗೆ ಒಬ್ಬ ಗನ್ ಮ್ಯಾನ್ ನನ್ನು ಇಲಾಖೆ ಹಿಂಪಡೆದಿದೆ.

ಸದ್ಯ ನರೇಂದ್ರ ನಾಯಕ್ ಮಂಗಳೂರಿಗೆ ಬಂದಿದ್ದು, ಪ್ಲ್ಯಾಟ್ ನಲ್ಲಿ ನಡೆದಿರುವ ಘಟನೆ ಕುರಿತು ನರೇಂದ್ರ ನಾಯಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಸಾಧ್ಯತೆ ಇದೆ.

By Suddi9

Leave a Reply

Your email address will not be published. Required fields are marked *