ಬಂಟ್ವಾಳ: ಪೆರ್ಡೂರು ಬಳಿ ದನದ ವ್ಯಾಪಾರಿ ಹುಸೈನಬ್ಬ ಸಾವು ಪ್ರಕರಣವನ್ನು ಸಿಐಡಿಗೆ ತನಿಖೆಗೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ. ಇದಕ್ಕೆ ಸಂಬಂಧಿಸಿದಂತೆ 2-3 ದಿನಗಳಲ್ಲಿ ಸಿಐಡಿ ಅಧಿಕಾರಿಗಳು ಉಡುಪಿಗೆ ಆಗಮಿಸಿ ತನಿಖೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಪೆರ್ಡೂರಿನ ಸೀನಬೆಟ್ಟು ಎಂಬಲ್ಲಿ ಬಜರಂಗದಳದ ಕಾರ್ಯಕರ್ತರ ದಾಳಿ ಮೇಲೆ ಮಂಗಳೂರು ಜೋಕಟ್ಟೆಯ ದನದ ವ್ಯಾಪಾರಿ ಹುಸೈನಬ್ಬ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯಡ್ಕ ಠಾಣೆಯ ಎಸ್ ಐ, ಇಬ್ಬರು ಪೊಲೀಸರು ಸೇರಿದಂತೆ 10ಮಂದಿಯನ್ನು ಈಗಾಗಲೇ ವಶಕ್ಕೆ ಪಡೆದು ಬಂಧಿಸಲಾಗಿದೆ.

