ಬೆಳ್ತಂಗಡಿ: ತಾಲೂಕಿನ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರ ಅಗಾಧ ಪರಿಶ್ರಮ, ಮತದಾರರ ಆಶೀರ್ವಾದದ ಫಲವಾಗಿ ತಾನು ಅತ್ಯಧಿಕ ಅಂತರದಿಂದ ಗೆಲುವು ಸಾಧಿಸಿದ್ದೇನೆ ಎಂದು ಬಿಜೆಪಿಯ ನೂತನ ಶಾಸಕ ಹರೀಶ್ ಪೂಂಜ ಹೇಳಿದ್ದಾರೆ.
ತಾಲೂಕಿನ ಅರಸಿನಮಕ್ಕಿ ಪೇಟೆಯಲ್ಲಿ ಹತ್ಯಡ್ಕ ಗ್ರಾಮದ ಬಿಜೆಪಿ ಕಾರ್ಯಕರ್ತರು, ಮತದಾರರು ಹಾಗೂ ಪೇಜ್ ಪ್ರಮುಖರಿಗೆ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತಾಲೂಕಿನ ಜನರ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ತಿಳಿದುಕೊಂಡಿದ್ದೇನೆ. ಎಲ್ಲ ಬೇಡಿಕೆಗಳನ್ನು ಈಡೇರಿಸುವಲ್ಲಿ ಶಕ್ತಿಮೀರಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖ ನಾಯಕರು ಉಪಸ್ಥಿತರಿದ್ದರು.

