ಬಂಟ್ವಾಳ: ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ ವತಿಯಿಂದ 2018ನೇ ಸಾಲಿನ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಪ್ರಥಮ, ದ್ವಿತೀಯ ಮತ್ತು ತೃತೀಯ ವಿದ್ಯಾರ್ಥಿಗಳು, ಪಿ.ಯು.ಸಿ ಯಲ್ಲಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಪ್ರತ್ಯೇಕ ಪ್ರತ್ಯೇಕವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದಿರುವ ಸ್ವಜಾತಿಯ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿರುತ್ತಾರೆ.
2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 80 ಕ್ಕಿಂತ ಹೆಚ್ಚು ಅಂಕಗಳಿಸಿರುವ ಬಂಟ್ವಾಳ ತಾಲೂಕಿನ ನಿವಾಸಿ ವಿದ್ಯಾರ್ಥಿಗಳು ದೃಢೀಕೃತ ಅಂಕಪಟ್ಟಿ, ಕಲಿಕಾ ದೃಢಪತ್ರ ಮತ್ತು ಆಧಾರ್ ಕಾರ್ಡಿನ ಪ್ರತಿಯೊಂದಿಗೆ ಜುಲೈ 15ರ ಒಳಗೆ ಅಧ್ಯಕ್ಷರು, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ, ಕುಲಾಲ ಸಮುದಾಯ ಭವನ, ಪೊಸಳ್ಳಿ-ಬಿ.ಸಿ ರೋಡ್, ದ.ಕ ಇವರಿಗೆ ತಲುಪುವಂತೆ ಅರ್ಜಿ ಸಲ್ಲಿಸಬಹುದು ಎಂದು ಸಂಘದ ಅಧ್ಯಕ್ಷ ಡಿ.ಎಂ.ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *