ಬಂಟ್ವಾಳ: ಧರ್ಮಸ್ಥಳ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರದಲ್ಲಿ ಸೆ.3 ರಂದು ನಡೆಯಲಿರುವ ಇಲ್ಲಿನ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ದಶಾಮಾನೋತ್ಸವ ಮತ್ತು ರಾಷ್ಟ್ರೀಯ ಧರ್ಮ ಸಂಸದ್ ಕಾರ್ಯಕ್ರಮಕ್ಕೆ ವಿವಿಧ ಮಠಾಧೀಶರನ್ನು ಶನಿವಾರ ಆಹ್ವಾನಿಸಲಾಯಿತು.

ಮಾಣಿಲ ಶ್ರೀಧಾಮ ಶ್ರೀ ಮೋಹನದಾಸ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಗುರುದೇವಾನಂದ ಸ್ವಾಮೀಜಿ, ಬಾಳೆಕೋಡಿ ಶ್ರೀ ಕಾಶಿಕಾಳಭೈರವೇಶ್ವರ ಶಿಲಾಂಜನ ಕ್ಷೇತ್ರದ ಶ್ರೀ ಶಶಿಕಾಂತಮಣಿ ಸ್ವಾಮೀಜಿ, ಕಾನಿಯೂರು ಶ್ರೀ ಚಾಮುಂಡೇಶ್ವರೀ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ, ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸ್ವಾಮೀಜಿ, ಎಡನೀರು ಮಠದ ಶ್ರೀ ಕೇಶಾವನಂದ ಭಾರತಿ ಮಹಾಸ್ವಾಮಿಯವರ ಮಠಕ್ಕೆ ತೆರಳಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಟ್ರಸ್ಟಿಗಳಾದ ಚಿತ್ತರಂಜನ್ ಗರೋಡಿ ಮೋಹನ್ ಉಜ್ಜೋಡಿ, ಧರ್ಮ ಸಂಸದ್ ಸಮಿಯಿ ಸತ್ಯಜಿತ್ ಸುರತ್ಕಲ್, ಜಿಲ್ಲಾ ಸಂಚಾಲಕ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ , ಬಂಟ್ವಾಳ ಶ್ರೀರಾಮ ಕ್ಷೇತ್ರ ಸೇವಾ ಸಮಿತಿಯ ಗೌರವಾಧ್ಯಕ್ಷ ರುಕ್ಮಯಪೂಜಾರಿ, ಅಧ್ಯಕ್ಷ ಕೆ. ಸಂಜೀವ ಪೂಜಾರಿ ಬೊಳ್ಳಾಯಿ, ಸಂಚಾಲಕ ಬೇಬಿ ಕುಂದರ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಪುರಸಭಾ ಸಮಿತಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗುಡಿಗಾರ್ ಮತ್ತಿತರರು ಹಾಜರಿದ್ದರು.
