ಬಂಟ್ವಾಳ: ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟಕ್ಕೆ ಸಂಯೋಜನೆ ಗೊಂಡಿರುವ ಬಂಟ್ವಾಳ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಮಾಲೋಚನಾ ಸಭೆಯು ದಿನಾಂಕ ಜೂನ್ 27 ರಂದು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ ಯವರ ಅಧ್ಯಕ್ಷತೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಗಾಣದಪಡ್ಪು ಬಿಸಿ ರೋಡ್ ನಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ .
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ಉತ್ತಮ ಸಂಘಗಳಿಗೆ ಪ್ರಶಸ್ತಿ , SSLC ಹಾಗೂ PUC ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಹೈನುಗಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ನಡೆಯಲಿದೆ ಎಂದು ದಕ್ಶಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಿಸ್ತರಣಾಧಿಕಾರಿಜಗದೀಶ .ಎ ಪ್ರಕಟನೆಯಲ್ಲಿ ತಿಳಿಸಿದ್ದಾರೆ
