ಬಂಟ್ವಾಳ: ಧರ್ಮಸ್ಥಳ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರದಲ್ಲಿ ಸೆ.3 ರಂದು ನಡೆಯಲಿರುವ ಇಲ್ಲಿನ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ದಶಾಮಾನೋತ್ಸವ ಮತ್ತು ರಾಷ್ಟ್ರೀಯ ಧರ್ಮ ಸಂಸದ್ ಕಾರ್ಯಕ್ರಮಕ್ಕೆ ವಿವಿಧ ಮಠಾಧೀಶರನ್ನು ಭಾನುವಾರ ಆಹ್ವಾನಿಸಲಾಯಿತು.
ಕರಿಂಜೆ ಕ್ಷೇತ್ರದ ಶ್ರೀ ಮುಕ್ತಾನಂದ ಸ್ವಾಮೀಜಿ, ಕೇಮರು ಸಾಧನಾಶ್ರಮದ ಶ್ರೀ ವಿಠಲದಾಸ ಸ್ವಾಮೀಜಿ, ಶ್ರೀ ರಾಮಕೃಷ್ಣ ತಪೋವನದ ವಿವೇಕ ಚೈತನ್ಯನಂದ ಸ್ವಾಮೀಜಿ, ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಮಂಗಳೂರು ರಾಮಕೃಷ್ಣ ಮಿಷನ್ನಿನ ಶ್ರೀ ಜಿತಕಾಮಾನಂದ ಸ್ವಾಮೀಜಿ, ಕುಂಪಲ ಶ್ರೀ ಕೃಷ್ಣ ಮುಖ್ಯಪ್ರಾಣ ದೇವಸ್ಥಾನದ ಬಾಲಯೋಗಿ ಅಮೃತಾನಂದ, ಗುರುಪುರ ವಜ್ರದೇಹಿ ಮಠ, ಕದ್ರಿ ಯೋಗೀಶ್ವರ ಮಠ, ಮರಕಡ ಶ್ರೀ ಗುರು ಪರಾಶಕ್ತಿ ಕ್ಷೇತ್ರಕ್ಕೆ ಭೇಟಿ ನೀಡಿ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಬಗ್ಗೆ ಶ್ರೀಗಳು, ಸ್ವಾಮೀಜಿಗಳ ಜೊತೆ ಚರ್ಚೆ ನಡೆಸಿ ಕಾರ್ಯಕ್ರಮದ ಧ್ಯೇಯೋದ್ದೇಶಗಳ ಬಗ್ಗೆ ವಿವರಿಸಿದರು. ಕ್ಷೇತ್ರದ ಟ್ರಸ್ಟಿಗಳಾದ ಚಿತ್ತರಂಜನ್ ಗರೋಡಿ ಮೋಹನ್ ಉಜ್ಜೋಡಿ, ಧರ್ಮ ಸಂಸದ್ ಸಮಿತಿಯ ಸಂಚಾಲಕ ಸತ್ಯಜಿತ್ ಸುರತ್ಕಲ್, ಜಿಲ್ಲಾ ಸಂಚಾಲಕ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ , ಕೃಷ್ಣಪ್ಪ ಗುಡಿಗಾರ್, ಲೋಹಿತ್ ಹಾಜರಿದ್ದರು.
