ಬಂಟ್ವಾಳ:ಇಲ್ಲಿನ ಪುರಸಭಾ ವ್ಯಾಪ್ತಿಯ ಪ್ರತೀ ಮನೆ ಸಹಿತ ಹೋಟೆಲ್ ಮತ್ತಿತರ ವಾಣಿಜ್ಯ ಸಂಕೀರ್ಣಗಳಿಂದ ಉಂಟಾಗುವ ತ್ಯಾಜ್ಯಗಳನ್ನು ಪ್ರತೀ ಸೋಮವಾರದಿಂದ ಗುರುವಾರ ತನಕ ಹಸಿ ಕಸ ಹಾಗೂ ಶುಕ್ರವಾರ ಮಾತ್ರ ಒಣ ಕಸ ಸಂಗ್ರಹಿಸಿ ವಿಲೇವಾರಿ ಮಾಡಲಾಗುತ್ತದೆ. ಇದರಿಂದಾಗಿ ಇಲ್ಲಿನ ನಾಗರಿಕರು ಇದೇ 1ರಿಂದ ಹಸಿ ಕಸ ಮತ್ತು ಒಣ ಕಸ ಪ್ರತ್ಯೇಕಿಸಿ ನಿಗದಿತ ದಿನಗಳಂದು ಬರುವ ಪುರಸಭೆ ತ್ಯಾಜ್ಯ ಸಂಗ್ರಹಣಾ ವಾಹನಕ್ಕೆ ನೀಡುವಂತೆ ಪ್ರಕಟಣೆ ತಿಳಿಸಿದೆ.
