ಪುತ್ತೂರು: ಭಾರತೀಯ ಜನತಾ ಪಾರ್ಟಿ ರಾಜ್ಯ ಯುವಮೋರ್ಚಾದ ಕರೆಯಂತೆ ಜಿಲ್ಲಾ ಬಿ.ಜೆ.ಪಿ ಯುವಮೋರ್ಚಾದಿಂದ ಜುಲೈ 15ರಂದು ಬೆಳಗ್ಗೆ 9.30 ಗಂಟೆಗೆ ನಮೋ ಯೋಜನೆಗಳ ಬಗ್ಗೆ ಜಾಗೃತಿ ಜಾಥವನ್ನು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಸಂಸದ ಹಾಗೂ ಯುವಮೋರ್ಚಾ ರಾಜ್ಯಾಧ್ಯಕ್ಷ ಪ್ರತಾಪ್‍ಸಿಂಹ ಮತ್ತು ಸ್ಥಳೀಯ ಶಾಸಕರಾದ ಸಂಜೀವ ಮಠಂದೂರು ರವರು ಉದ್ಘಾಟಿಸಲಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್, ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಶಾಸಕ ಹರೀಶ್ ಪೂಂಜ, ರಾಜ್ಯ ಯುವಮೋರ್ಚಾ ಉಪಾಧ್ಯಕ್ಷರಾದ ವಿಜಯೇಂದ್ರ ಅಲ್ಲದೆ ರಾಜ್ಯದ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ. ಈ ವಾಹನ ಜಾಥವು 10.30ಗಂಟೆಗೆ ಬಂಟ್ವಾಳ ಕ್ಷೇತ್ರದ ಮಾಣಿಯನ್ನು ಪ್ರವೇಶಿಸಲಿದ್ದು ಮಾಣಿಯಲ್ಲಿ ಬಂಟ್ವಾಳ ಕ್ಷೇತ್ರ ಯುವಮೋರ್ಚಾ ನೇತೃತ್ವದಲ್ಲಿ ಜಾಥವನ್ನು ಅಭೂತ ಪೂರ್ವವಾಗಿಸ್ವಾಗತಿಸಲಾಗುವುದು. ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿ.ಜೆ.ಪಿಯ ವಕ್ತಾರರಾದ ಹರಿಕೃಷ್ಣ ಬಂಟ್ವಾಳ , ಕ್ಷೇತ್ರದ ಅಧ್ಯಕ್ಷರಾದ ಬಿ.ದೇವದಾಸ್ ಶೆಟ್ಟಿ ಸಹಿತ ಪ್ರಮುಖರು ಭಾಗವಹಿಸಲಿದ್ದಾರೆ. ಈ ಜಾಥದಲ್ಲಿ ಬಂಟ್ವಾಳ ಕ್ಷೇತ್ರದಿಂದ ಸುಮಾರು 300 ವಾಹನಗಳು ಭಾಗವಹಿಸಲಿದ್ದು ಬಂಟ್ವಾಳ ಕ್ಷೇತ್ರದ ತುಂಬೆಯವರೆಗೆ ಸಾಗಿ ಬೀಳ್ಕೊಡಲಾಗುವುದು ನಂತರ ಜಾಥವು ಮಂಗಳೂರು ಮೂಲಕ ಸುರತ್ಕಲ್‍ಗೆ ಸಾಗಿ ಅಲ್ಲಿ ಸಮಾರೋಪ ಸಮಾರಂಭ ಜರುಗಳಿದೆ. ವಿಧಾನಪರಿಷತ್‍ನ ವಿರೋಧ ಪಕ್ಷದ ನಾಯಕರಾದ ಶ್ರೀನಿವಾಸ್ ಪೂಜಾರಿ, ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಸುನೀಲ್ ಕುಮಾರ್, ಸ್ಥಳೀಯ ಶಾಸಕರಾದ ಭರತ್ ಶೆಟ್ಟಿ ಶಾಸಕರಾದ ಉಮಾನಾಥ್ ಕೋಟ್ಯಾನ್, ವೇದವ್ಯಾಸ ಕಾಮತ್ ಭಾಗವಹಿಸಲಿದ್ದಾರೆ ಎಂದು ಬಂಟ್ವಾಳ ಯುವಮೋರ್ಚಾ ಅಧ್ಯಕ್ಷರಾದ ವಜ್ರನಾಥ ಕಲ್ಲಡ್ಕ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
