ವಿಟ್ಲ: ದ ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿ ಪಡಿಬಾಗಿಲು ಇಲ್ಲಿ ಉಚಿತ ಚಪ್ಪಲಿ ವಿತರಣಾ ಕಾರ್ಯಕ್ರಮ ನಡೆಯಿತು. ದ ಕ ಜಿಲ್ಲಾ ಪಂಚಾಯತ್ ಸದಸ್ಯೆ  ಜಯಶ್ರೀ ಕೋಡಂದೂರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಚಪ್ಪಲಿ ವಿತರಿಸಿ ಶುಭ ಹಾರೈಸಿದರು.

chappal vitharane

 

ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಎಸ್ ಡಿ ಎಂ ಸಿ ಅಧ್ಯಕ್ಷ ಬಾಲಕೃಷ್ಣ ಕಾರಂತ, ಸದಸ್ಯರುಗಳಾದ ಪ್ರಭಾಕರ ಶೆಟ್ಟಿ ದಂಬೆಕಾನ, ಜಿನಚಂದ್ರ ಜೈನ್, ನರಸಿಂಹ ಬಲ್ಲಾಳ್ ಹಾಗೂ ಇತರರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶಶಿಕಲಾ ಪ್ರಸ್ತಾವಿಸಿ ಸ್ವಾಗತಿಸಿದರು. ಸಹಶಿಕ್ಷಕಿ ಲಲಿತಾ ಕೆ ವಂದಿಸಿದರು. ಪ್ರೌಢಶಾಲಾ ಶಿಕ್ಷಕಿ ಪುಷ್ಪಾವತಿ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *