ಕೈಕಂಬ: ಅವರ್ ಲೇಡಿ ಆಫ್ ಪೊಂಪೈ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ ಶಾಲಾ ಆವರಣದಲ್ಲಿ ನಡೆಯಿತು. ಶಾಲಾ ಸಂಚಾಲಕಿ ಪ್ಲೋರೆನ್ಸ್ ಮೆಂಡೀಸ್ ಕಾರ್ಯಕ್ರಮ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಕ ಮುನಿರಾಜ ರೆಂಜಾಳ “ಶಿಕ್ಷಕ ಮತ್ತು ರಕ್ಷಕ ಜವಾಬ್ದಾರಿ” ವಿಷಯದ ಕುರಿತು ಉಪನ್ಯಾಸ ನೀಡಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅನಂತಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿದರು. ಮ್ಯಾನೆಜಿಂಗ್ ಟ್ರಸ್ಟಿ ವಾಲ್ಟರ್ ಸ್ಟೀಫನ್ ಮೆಂಡಿಸ್, ಪೂರ್ವಾಧ್ಯಕ್ಷರಾದ ಸುದೇಶ್ ಕುಮಾರ್, ಸಂಘದ ಸದಸ್ಯ ಅಹಮ್ಮದ್ ಕಬೀರ್ ಉಪಸ್ಥಿತರಿದ್ದರು. ಪ್ರಾಂಶುಪಾಲ ಮಹೇಶ್ ಶೆಟ್ಟಿ ಶೈಕ್ಷಣಿಕ ಸೂಚನೆಗಳನ್ನು ನೀಡಿದರು. ನಿಶಾ ಸ್ವಾಗತಿಸಿ, ಅಪೇಕ್ಷಾ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಸ್ವರ್ಣಲತಾ ವಂದಿಸಿದರು.

