ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ಪರಿಸರ ಜಾಗೃತಿ ಮೂಡಿಸುವ ಸಲುವಾಗಿ ರೋವರ್ಸ್ ರೇಂಜರ್ಸ್ ಘಟಕದ ವತಿಯಿಂದ ಕಾಲೇಜಿನ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಇತ್ತೀಚೆಗೆ ನಡೆಸಲಾಯಿತು.

ಪರಿಸರವನ್ನು ಉಳಿಸಿ ಬೆಳೆಸುವ ಅದನ್ನು ಮುಂದಿನ ಪೀಳಿಗೆಗೂ ಒದಗಿಸುವ ಕುರಿತು ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿಯವರು ಮಾಹಿತಿ ನೀಡಿದರು. ಮೂಡುಬಿದಿರೆ ಅರಣ್ಯ ಇಲಾಖೆಯ ಅಧಿಕಾರಿ ಮಂಜುನಾಥ ಅರಣ್ಯ ಇಲಾಖೆಯ ವತಿಯಿಂದ ಸಸಿಗಳನ್ನು ನೀಡಿದ್ದರು. ಎಲ್ಲಾ ವಿದ್ಯಾರ್ಥಿಗಳೂ ಒಂದೊಂದು ಗಿಡವನ್ನು ನೆಟ್ಟು ಪೋಷಿಸುವ ಪ್ರತಿಜ್ಞೆ ಕೈಕೊಂಡರು.
ಈ ಸಂದರ್ಭದಲ್ಲಿ ಸಂಖ್ಯಾಶಾಸ್ತ್ರ ಉಪನ್ಯಾಸಕರಾದ ಶ್ರೀ ಸ್ವರಾಜ್ ಉಪಸ್ಥಿತರಿದ್ದರು. ವಿನಯ್ ಪಾಟೀಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
