ಬಂಟ್ವಾಳ: ಬಿ.ಸಿ.ರೋಡು ಭಾರತೀಯ ಜೀವ ವಿಮಾ ನಿಗಮ ಶಾಖೆಯ ನಿವೃತ್ತ ಆಡಳಿತಾಧಿಕಾರಿ ಸಂಪಿಲ ರಾಮಯ್ಯ ಶೆಟ್ಟಿ ಇವರಿಗೆ ಇಲ್ಲಿನ ಸ್ಪೋಟ್ರ್ಸ್ ಮತ್ತು ರಿಕ್ರಿಯೇಶನ್ ಕ್ಲಬ್ಬಿನ ವತಿಯಿಂದ ಜು. 30ರಂದು ಸಂಜೆ 4 ಗಂಟೆಗೆ ಬೀಳ್ಕೊಡುಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್‍ಐಸಿ ಸಭಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಿರಿಯ ಶಾಖಾಧಿಕಾರಿ ಪ್ರೇಮನಾಥ ರಾವ್, ಬಿ.ಸಿ.ರೋಡಿನ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ಪ್ರೊ.ಕೆ.ತುಕಾರಾಮ ಪೂಜಾರಿ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಕ್ಲಬ್ಬಿನ ಕಾರ್ಯದರ್ಶಿ ಮಧ್ವರಾಜ್ ಬಿ.ಕಲ್ಮಾಡಿ ತಿಳಿಸಿದ್ದಾರೆ.
