ಬಂಟ್ವಾಳ:ತಾಲ್ಲೂಕಿನ ಗಾಣಿಗರ ಸೇವಾ ಸಂಘದ ವತಿಯಿಂದ ಪಾಣೆಮಂಗಳೂರು ಸುಮಂಗಲಾ ಕಲ್ಯಾಣ ಮಂಟಪದಲ್ಲಿ ಇದೇ 29ರಂದು ಸ್ವಜಾತಿ ವಿದ್ಯಾರ್ಥಿಗಳಿಗೆ ‘ವಿದ್ಯಾರ್ಥಿ ಪ್ರೋತ್ಸಾಹಧನ’ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಕ್ಷೇತ್ರದ ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಕುಮಟಾ ಕ್ಷೇತ್ರದ ಶಾಸಕ ದಿನಕರ ಎಸ್.ಶೆಟ್ಟಿ, ಸಂಘದ ಜಿಲ್ಲಾಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಮತ್ತಿತರ ಹಲವು ಗಣ್ಯರು ಭಾಗವಹಿಸಲಿದ್ದಾರೆ.ಇದೇ ವೇಳೆ ಭಾರತೀಯ ಭೂಸೇನೆ ನಿವೃತ್ತ ಯೋಧ ಕರೆಂಕಿ ಮೋನಪ್ಪ ಸಪಲ್ಯ ಇವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *