ಬಂಟ್ವಾಳ:ತಾಲ್ಲೂಕಿನ ಪುಂಜಾಲಕಟ್ಟೆ ಸಮೀಪದ ಕುಕ್ಕಳ ಗ್ರಾಮದ ಮಾಣಿಂಜ ನಿವಾಸಿ, ಪ್ರಗತಿಪರ ಕೃಷಿಕ ರವೀಂದ್ರ ಪೂಜಾರಿ (83) ಇವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಮೃತರು ಪುಂಜಾಲಕಟ್ಟೆ-ಮಡಂತ್ಯಾರು ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷರಾಗಿ, ಕಂಬಳ ಪ್ರೋತ್ಸಾಹಕರಾಗಿ, ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ ಗೌರವ ಸಲಹೆಗಾರರಾಗಿ, ಬಸವನಗುಡಿ ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಸಮಿತಿ, ಜಾತ್ಯತೀತ ಜನತಾದಳ ಘಟಕ ಸದಸ್ಯರಾಗಿದ್ದರು.
ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ಕೆ. ವಸಂತ ಬಂಗೇರ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ. ತುಂಗಪ್ಪ ಬಂಗೇರ ಮತ್ತಿತರರು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.
