ಬಂಟ್ವಾಳ: ಶಿಕ್ಷಣವು ಕೇವಲ ಅಂಕಗಳಿಕೆಗೆ ಸೀಮಿತವಾಗದೆ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ನಿರ್ಮಾಣದ ಜೊತೆಗೆ ಸೇವಾ ಮನೋಭಾವನೆಯ ಮೌಲ್ಯಗಳನ್ನು ಕೂಡಾ ಬೆಳೆಸುವುದು ಅನಿವಾರ್ಯವಾಗಿದೆ ಎಂದು ಉಜಿರೆ ಎಸ್ಡಿಎಂ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಮೋಹನ ನಾರಾಯಣ ಹೇಳಿದ್ದಾರೆ.
ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳಿಗೆ ಇವರು ಬುಧವಾರ ಚಾಲನೆ ನೀಡಿ ಮಾತನಾಡಿದರು.
ಶ್ರೀರಾಮ ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್ ಎನ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್ಕಟ್ಟೆ, ಯೋಜನಾಧಿಕಾರಿ ಹರೀಶ್, ಪ್ರಮುಖರಾದ ಪೂರ್ಣಿಮಾ ಮೋಹನ ನಾರಾಯಣ, ಉಪಸ್ಥಿತರಿದ್ದರು. ವೇಘಾಶಿನಿ ಸ್ವಾಗತಿಸಿ, ಜಯೇಶ್ ವಂದಿಸಿದರು. ಭವಾನಿ ಕಾರ್ಯಕ್ರಮ ನಿರೂಪಿಸಿದರು.
